ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕ ದುಪ್ಪಟ್ಟು, ಆಗಸ್ಟ್ 31 ರಿಂದ ಜಾರಿ; ಕಂದಾಯ ಇಲಾಖೆ ಆದೇಶ

Aug 30, 2025 - 10:21
ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕ ದುಪ್ಪಟ್ಟು, ಆಗಸ್ಟ್ 31 ರಿಂದ ಜಾರಿ; ಕಂದಾಯ ಇಲಾಖೆ ಆದೇಶ

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಆ.31ರಿಂದ ಅನ್ವಯವಾಗುವಂತೆ ನೋಂದಣಿ ಶುಲ್ಕ ಶೇ.1ರಿಂದ ಶೇ.2ಕ್ಕೆ ಹೆಚ್ಚಳ ಆಗಲಿದೆ. ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ, ಸ್ವಾಧೀನ ಭೋಗ್ಯ ಪತ್ರ, ಕ್ರಯ ಉದ್ದೇಶದ ಜಿಪಿಎ ಸೇರಿ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ.

ಈವರೆಗೆ ರಾಜ್ಯದಲ್ಲಿ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿ ಯಾವುದೇ ಸ್ಥಿರಾಸ್ತಿ ಖರೀದಿ ವೇಳೆ ಶೇ.1 ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6 ರಷ್ಟು ಮುದ್ರಾಂಕ ಶುಲ್ಕ ಸೇರಿ ಒಟ್ಟು ಶೇ.6.6 ರಷ್ಟು ಶುಲ್ಕ ಭರಿಸಬೇಕಾಗಿತ್ತು. ಇದೀಗ ನೋಂದಣಿ ಶುಲ್ಕ ಶೇ.2 ರಷ್ಟಾಗಿರುವುದರಿಂದ ಆಸ್ತಿಯ ಮಾರುಕಟ್ಟೆ ಬೆಲೆಯ ಶೇ.7.6 ರಷ್ಟನ್ನು ನೋಂದಣಿ ಮತ್ತು ಮುದ್ರಾಂಕ ಶುಲ್ಕಕ್ಕೆ ಭರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ.

ಈ ಬಗ್ಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದೆ. ಇದರನ್ವಯ ಆ.31 ರಿಂದಲೇ ಅನ್ವಯವಾಗುವಂತೆ ನೋಂದಣಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಹೀಗಾಗಿ ನೋಂದಣಿ- ಮುದ್ರಾಂಕ ಶುಲ್ಕ ಮೊತ್ತ 7.6%ಕ್ಕೆ ಏರಿಕೆ. ಈಗಾಗಲೇ ನೋಂದಣಿಗೆ ಅರ್ಜಿ ಸಲ್ಲಿಸಿ ಅಪಾಯಿಂಟ್‌ಮೆಂಟ್‌ ಪಡೆದಿರುವವರಿಗೂ ಹೊಸ ದರ ಅನ್ವಯ. ಕಂದಾಯ ಇಲಾಖೆ ಆದೇಶ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0