ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಸಂಘಪರಿವಾರ ಕಾರ್ಯಕರ್ತರ ಪ್ರತಿಭಟನೆ, ಲಾಠಿಚಾರ್ಜ್‌

Sep 8, 2025 - 19:05
ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಸಂಘಪರಿವಾರ ಕಾರ್ಯಕರ್ತರ ಪ್ರತಿಭಟನೆ, ಲಾಠಿಚಾರ್ಜ್‌

ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ವೇಳೆ ಘರ್ಷಣೆ ಉಂಟಾಗಿರುವ ಆರೋಪದ ಮೇಲೆ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಸೀದಿ ಮುಂದೆ ಡಿಜೆ ಹಾಕಿ ಸಂಘಪರಿವಾರದ ಕಾರ್ಯಕರ್ತರು ನೃತ್ಯ ಮಾಡಲು ಆರಂಭಿಸಿದರು. ಮಸೀದಿ ಜಾಗ ಬಿಟ್ಟು ಹೋಗುವಂತೆ ಪೊಲೀಸರು ಈ ಸಂದರ್ಭದಲ್ಲಿ ಸೂಚಿಸಿದರು. ಆದರೆ ಸಂಘಪರಿವಾರದ ಕಾರ್ಯಕರ್ತರು ಸ್ಥಳದಿಂದ ಕದಲಿಲ್ಲ. ಘೋಷಣೆ ಕೂಗುತ್ತಾ ಡ್ಯಾನ್ಸ್‌ ಮಾಡುತ್ತಿದ್ದಂತೆ ಪೊಲೀಸರು ಲಾಠಿ ಬೀಸಿದ್ದಾರೆ. ಲಾಠಿ ಬೀಸುತ್ತಿದ್ದಂತೆ ಸಂಘಪರಿವಾರದ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿದ್ದಾರೆ.

What's Your Reaction?

Like Like 1
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 1