ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರಿಗೆ ಆಹ್ವಾನ ಪ್ರಶ್ನಿಸಿ ಪ್ರತಾಪ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಸಹಿತ ಮೂವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಸಕ್ತ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನ ಹಿಂಪಡೆಯಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರತಾಪ ಸಿಂಹ, ಬೆಂಗಳೂರಿನ ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್. ಸೌಮ್ಯಾ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ನೇತೃತ್ವದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.“ರಾಜ್ಯ ಸರಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ ಅಥವಾ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಹೇಗೆ ವಿರುದ್ಧ ಎಂದು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿರುವುದರಂದ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ವಿಸ್ತೃತ ಆದೇಶ ಆನಂತರ ಪ್ರಕಟಿಸಲಾಗುವುದು“ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



