ಉತ್ತರಾಖಂಡದಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ; ಹಲವರ ನಾಪತ್ತೆ

Sep 16, 2025 - 12:23
ಉತ್ತರಾಖಂಡದಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ; ಹಲವರ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ವಿವಿಧೆಡೆ ಸೋಮವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು, ಮನೆಗಳು, ಅಂಗಡಿಗಳು ಹಾನಿಗೊಂಡಿವೆ. ಮಂಗಳವಾರ ಮುಂಜಾನೆ ಸೇತುವೆಯೊಂದು ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೆಹ್ರಾಡೂನ್‌ನ ಸಹಸ್ರಧಾರ, ಮಾಲ್ ದೇವತಾ ಮತ್ತು ಮಸ್ಸೂರಿಯಲ್ಲಿ ಹಾನಿ ಉಂಟಾಗಿದೆ. ಇಬ್ಬರಿಂದ ಮೂವರು ಮಂದಿ ಕಾಣೆಯಾಗಿದ್ದಾರೆ. ಇನ್ನೊಬ್ಬರು ಮೃತಪಟ್ಟಿರುವ ಬಗ್ಗೆಯೂ ವರದಿಯಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0