ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ
ಹೇಳಿದ್ದಾರೆ.
ವಿಧಾನಸೌಧದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು ಸಹೋದ್ಯೋಗಿಗಳಿಗೆ ಬಜೆಟ್ ದಿಕ್ಕಿನ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದರು.
ಈ ಕುರಿತು ಮಾತನಾಡಿದ ಸಿಎಂ, ಸಾಲವೂ ಇದೆ. ಆದರೆ ವಿತ್ತೀಯ ಶಿಸ್ತಿನೊಳಗೆ ಇದೆ. ಜಿಎಸ್‌ಡಿಪಿ 25% ಒಳಗೆ ಇದೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದರು.
ಈ ಬಾರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಗಾತ್ರ 4.09 ಲಕ್ಷ ಕೋಟಿ ಇದೆ. ಬಜೆಟ್‌ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಕಳೆದ ಬಾರಿಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ಇತ್ತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



