ವಿಟ್ಲ: ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

Sep 22, 2025 - 12:02
ವಿಟ್ಲ: ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ವಿಟ್ಲ: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ರವಿವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಘಟನೆಯ ವೇಳೆ ಮುಹಮ್ಮದ್ ಅಜ್ಮನ್ ತನ್ನ ಸ್ನೇಹಿತರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0