ಪಶ್ಚಿಮ ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

Apr 9, 2025 - 16:43
ಪಶ್ಚಿಮ ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಲ್ಪಸಂಖ್ಯಾತ ಜನರು ಮತ್ತು ಅವರ ಆಸ್ತಿಯನ್ನು ರಕ್ಷಿಸುವುದಾಗಿ ಹೇಳಿದ್ದಾರೆ. ‘ವಕ್ಫ್ ಕಾಯ್ದೆ ಜಾರಿಗೆ ಬಂದಿರುವುದರಿಂದ ನೀವು ನೊಂದಿದ್ದೀರಿ ಎಂದು ನನಗೆ ತಿಳಿದಿದೆ. ನಮ್ಮ ಮೇಲೆ ನಂಬಿಕೆ ಇಡಿ. ಬಂಗಾಳದಲ್ಲಿ ಒಡೆದು ಆಳುವಂತಹ ಯಾವುದೇ ಘಟನೆ ನಡೆಯುವುದಿಲ್ಲ. ಈ ವಕ್ಫ್ ಮಸೂದೆ ಈಗ ಅಂಗೀಕಾರವಾಗಬಾರದಿತ್ತು’ ಎಂದು ಅವರು ಹೇಳಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0