ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ : ಬೈಕ್ ಸವಾರ ಮೃತ್ಯು

Sep 30, 2025 - 18:01
ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ : ಬೈಕ್ ಸವಾರ ಮೃತ್ಯು

ಪಡುಬಿದ್ರಿ : ಉಡುಪಿ ಜಿಲ್ಲೆಯ ಉಚ್ಚಿಲ‌ ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ನಡೆದಿದೆ.

ಮೃತ ಬೈಕ್‌ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಮೃತದೇಹವನ್ನು ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ, ಮೂಳೂರು ಅಂಬುಲೆನ್ಸ್‌ ನ ಹಮೀದ್‌, ರೈಸ್, ರಜಾಕ್, ಅನ್ವರ್ ಕೋಟೇಶ್ವರ, ಸಾದಿಕ್ ಪಡುಬಿದ್ರೆಯ ಶವಾಗಾರಕ್ಕೆ ಸಾಗಿಸಲು ಸಹಕರಿಸಿದರು.

ಘಟನಾ ಸ್ಥಳಕ್ಕೆ ಪಡುಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0