ಡಾರ್ಜಿಲಿಂಗ್‌ನಲ್ಲಿ ಭೂಕುಸಿತ, ಪ್ರವಾಹ: ಮೃತರ ಸಂಖ್ಯೆ 28ಕ್ಕೆ ಏರಿಕೆ

Oct 8, 2025 - 10:05
ಡಾರ್ಜಿಲಿಂಗ್‌ನಲ್ಲಿ ಭೂಕುಸಿತ, ಪ್ರವಾಹ: ಮೃತರ ಸಂಖ್ಯೆ 28ಕ್ಕೆ ಏರಿಕೆ

ಡಾರ್ಜಿಲಿಂಗ್‌: ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ವಿಪತ್ತು ನಿರ್ವಹಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಅನೇಕರು ನಾಪತ್ತೆಯಾಗಿದ್ದು, ಸಾವಿರಾರು ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿದ್ದಾರೆ.

ಡಾರ್ಜಿಲಿಂಗ್‌ ಜಿಲ್ಲೆಯ ಮಿರಿಕ್‌, ಸುಖಿಯಾಪೋಖರಿ, ಜೋರೊಬಂಗಲೊ, ಜಲಪೈಗುರಿ ಜಿಲ್ಲೆಯ ನಾಗರಾಕಾಟಾ ಪ್ರದೇಶದಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಮಣ್ಣು ಮತ್ತು ಅವಶೇಷಗಳಡಿ ಸಿಲುಕಿರುವವರಿಗಾಗಿ ಯಂತ್ರೋಪಕರಣಗಳನ್ನು ಬಳಸಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭೂಕುಸಿತ ಸಂಭವಿಸಿದ 40ಕ್ಕಿಂತ ಹೆಚ್ಚಿನ ಸ್ಥಳಗಳಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಮಿರಿಕ್‌–ಡಾರ್ಜಿಲಿಂಗ್‌ ಹಾಗೂ ಸುಖಿಯಾಪೋಖರಿ ರಸ್ತೆಗಳನ್ನು ಸಂಚಾರಮುಕ್ತಗೊಳಿಸಲು ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0