ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Apr 12, 2025 - 15:41
ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿಯು ಏಪ್ರಿಲ್ 17ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0