ಎ.18: ಅಡ್ಯಾರ್ ಕಣ್ಣೂರ್‌ನಲ್ಲಿ ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ
ಮಂಗಳೂರು: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರ ಅಪರಾಹ್ನ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರ್ ಶಾ ಗಾರ್ಡನ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಸೈಯದ್ ಇಸ್ಮಾಯಿಲ್ ತಂಙಳ್ ಉಜಿರೆ ಹೇಳಿದ್ದಾರೆ.
ನಗರದ ಖಾಸಗಿ ಹೊಟೇಲಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಸ್ಲಿಮರನ್ನು ದಮನಿಸುವ ಉದ್ದೇಶದಿಂದ ಕೇಂದ್ರ ಸರಕಾರ ಈ ಕಾಯ್ದೆಯನ್ನು ಜಾರಿಗೊಳಿಸಿದೆ. ಇದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಅದಕ್ಕೆ ಪೂರಕವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಿ ನಮ್ಮ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ದ.ಕ.ಮತ್ತು ಉಡುಪಿ ಜಿಲ್ಲೆಯ ಲಕ್ಷಾಂತರ ಮಂದಿ ಭಾಗವಹಿಸಲಿದ್ದಾರೆ ಎಂದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



