ಕರ್ನಾಟಕದಲ್ಲಿ ಇನ್ನೂ ಮುಂದುವರೆಯಲಿದೆ ಮಳೆ! ಈ 4 ಜಿಲ್ಲೆಗಳಿಗೆ ಹೈ ಅಲರ್ಟ್
ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಿಟ್ಟುಬಿಡದೆ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್ ಹಿಂದೆ ಸರಿಯುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ, ಕರ್ನಾಟಕದಲ್ಲಿ ಮಳೆ ಅಲರ್ಟ್ (Rain Alert) ಘೋಷಣೆ ಮಾಡಿತ್ತು. ಅಲ್ಲದೇ ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಇಂದು (ಅ.21) ಕೂಡಾ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ 4 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅಲರ್ಟ್ ಮುಂದಿನ 24 ಗಂಟೆಗಳಲ್ಲಿ ಮಧ್ಯಮದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಹಿನ್ನೆಲೆಯಲ್ಲಿ ಮಳೆ ನಿರಂತರವಾಗಿ ಸುರಿಯುವ ಸೂಚನೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 21 ಮತ್ತು 22ರಂದು ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿ ಬೀಸಲಿದ್ದು, ದಕ್ಷಿಣ ಒಳನಾಡು ಭಾಗದಲ್ಲೂ ಅದೇ ರೀತಿಯ ಹವಾಮಾನ ಮುಂದುವರೆಯಲಿದೆ ಎನ್ನಲಾಗಿದೆ. IMD ಪ್ರಕಾರ, ಕರ್ನಾಟಕದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕರಾವಳಿ ಜಿಲ್ಲೆಗಳು): ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. 7-11 ಸೆಂ.ಮೀ.ಗಿಂತ ಹೆಚ್ಚು ಮಳೆಯಾಗಲಿದೆ ಎನ್ನಲಾಗಿದೆ. ಇನ್ನು ಈ ಜಿಲ್ಲೆಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ. ಬೀಸಲಿದೆ ಎನ್ನಲಾಗಿದೆ. ಕಡಲತೀರದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕೊಡಗು: ಈ ಜಿಲ್ಲೆಯಲ್ಲೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭೂಕುಸಿತದ ಅಪಾಯ ಹೆಚ್ಚಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಬಹುದು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿ ಮೈಸೂರು, ಹಾಸನ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಮಧ್ಯಮ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಲ್ಲುವುದು, ಟ್ರಾಫಿಕ್ ಜಾಮ್, ವಿದ್ಯುತ್ ಸಮಸ್ಯೆ ಮತ್ತು ಕಡಲತೀರದಲ್ಲಿ ಅಲೆಗಳ ಏರಿಕೆ ಹೆಚ್ಚಾಗಬಹುದು. ಬೆಂಗಳೂರಿನಲ್ಲಿ ಈಗಾಗಲೇ ಮಳೆಯಿಂದಾಗಿ ಕೆಲವು ಭಾಗಗಳಲ್ಲಿ ನೀರು ನಿಂತಿದ್ದು, ಮುಂದಿನ ದಿನಗಳಲ್ಲಿ ಈ ನೀರು ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗಿದೆ. ಅದಕ್ಕಾಗಿ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತದೆ. ಅಲ್ಲದೆ, ಆರೋಗ್ಯ ಇಲಾಖೆ ಮಳೆ ಸಂಬಂಧಿತ ರೋಗಗಳ ಬಗ್ಗೆ ಜಾಗೃತಿ ವಹಿಸುವಂತೆ ಸೂಚನೆ ನೀಡಲಾಗಿದೆ.
What's Your Reaction?
Like
0
Dislike
0
Love
2
Funny
0
Angry
0
Sad
0
Wow
0



