ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಹತ್ಯೆ - ಮೂವರು ಅರೆಸ್ಟ್
ಮೈಸೂರು : ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಲಾಗುತ್ತಿದ್ದ ಗ್ಯಾಂಗ್ ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿ ಪತ್ತೆಯಾಗಿದೆ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.
ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿ ಹೆಣ್ಣು ಭ್ರೂಣ ಲಿಂಗ ಪತ್ತೆಯಾದ್ರೆ ಭ್ರೂಣವನ್ನು ಹತ್ಯೆ ಮಾಡುತ್ತಿದ್ದರು. ಗ್ರಾಮೀಣ ಭಾಗದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಸ್ಕ್ಯಾನಿಂಗ್ ಬಂದಿದ್ದ ಇಬ್ಬರು ಗರ್ಭಿಣಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಗ್ಯ ಇಲಾಖೆ ಡಿಡಿ ವಿವೇಕ್ ದೊರೈ ನೇತೃತ್ವದಲ್ಲಿ ಮಂಡ್ಯ ಡಿಹೆಚ್ ಒ ಮೋಹನ್, ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ. ದಾಳಿ ವೇಳೆ ಲಾಕರ್ ನಲ್ಲಿದ್ದ ಮೂರು ಲಕ್ಷಕ್ಕೂ ಹೆಚ್ಚು ನಗದು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಭ್ರೂಣ ಹತ್ಯೆಗೆ ಬಳಸುತ್ತಿದ್ದ ಕಿಟ್ ಗಳು, ಔಷಧಿಗಳು ಪತ್ತೆಯಾಗಿವೆ. ಭ್ರೂಣ ಲಿಂಗ ಪತ್ತೆಗೆ 25 ಸಾವಿರ ರೂ. ನಿಗದಿ ಮಾಡಿದ್ದರು.
What's Your Reaction?
Like
0
Dislike
0
Love
0
Funny
0
Angry
1
Sad
0
Wow
0



