ತಮಿಳುನಾಡಿನಲ್ಲಿ ಚುನಾವಣಾ ಆಯೋಗ ನಡೆಸಲಿರುವ SIR ಪ್ರಕ್ರಿಯೆ ರಾಜಕೀಯ ಪ್ರೇರಿತ: ಉದಯನಿಧಿ ಸ್ಟಾಲಿನ್
ಚೆನ್ನೈ: ತಮಿಳುನಾಡಿನಲ್ಲಿ ಭಾರತೀಯ ಚುನಾವಣಾ ಆಯೋಗ ನಡೆಸಲು ಬಯಸಿರುವ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ(SIR) ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡುತ್ತಿರುವ ರಾಜಕೀಯ ಪ್ರೇರಿತವಾದ ಕ್ರಮ ಎಂದು ಡಿಸಿಎಂ ಉದಯನಿಧಿ ಸ್ಟಾಲಿನ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾವು ಈ ಎಸ್‌ಐಆರ್ ಪ್ರಕ್ರಿಯೆಯನ್ನು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ಬಿಹಾರ ಚುನಾವಣೆಯಲ್ಲಿ ಅವರು ಏನು ಮಾಡಿದ್ದಾರೆಂದು ನಾವು ನೋಡಿದ್ದೇವೆ. ಪ್ರಸ್ತುತ ಮಳೆಗಾಲ ಮತ್ತು ಮುಂದಿನ ಮೂರು ನಾಲ್ಕು ತಿಂಗಳಲ್ಲಿ ನಡೆಯಲಿರುವ ಚುನಾವಣೆಗಳನ್ನು ಗಮನಿಸಿದರೆ, ತಮಿಳುನಾಡಿನಲ್ಲಿ ಅಧಿಕಾರವನ್ನು ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಭಾವಿಸುತ್ತೇವೆ ಎಂದು ಹೇಳಿದ್ದಾರೆ.
ಎಸ್‌ಐಆರ್ ಮೂಲಕ ಚುನಾವಣೆಗಳು ನಡೆಯುವ ರಾಜ್ಯಗಳೆಲ್ಲಲ್ಲ ಕೇಂದ್ರವು ಅವರಿಗೆ ಬೆಂಬಲ ಸಿಗುವ ಪ್ರದೇಶಗಳಲ್ಲಿ ಮತಗಳನ್ನು ಉಳಿಸಿಕೊಳ್ಳುತ್ತಿದ್ದು, ಅವರಿಗೆ ವಿರುದ್ಧವಾಗಿರುವ ಸ್ಥಳಗಳಲ್ಲಿ ಪಟ್ಟಿಯಿಂದ ಅಲ್ಲಿನ ಜನರ ಹೆಸರುಗಳನ್ನು ತೆಗೆದುಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



