ಬಾಗಲಕೋಟೆ ಶಾಸಕ ಮತ್ತು ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ
ಬೆಂಗಳೂರು: ಬಾಗಲಕೋಟೆ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನರಾಗಿದ್ದಾರೆ. ಶ್ವಾಸಕೋಶದ ತೊಂದರೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ವಾರದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
79 ವರ್ಷದ ಹೆಚ್.ವೈ. ಇಂದು ಬೆಳಿಗ್ಗೆ 11.45ಕ್ಕೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಇಂದು ರಾತ್ರಿ ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಾಳೆ ಬೆಳಿಗ್ಗೆ ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ಲಿಂಗಾಯತ ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಜರುಗಲಿದೆ.
ಮೇಟಿ ಅವರುಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಮೂರು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1996ರ ಲೋಕಸಭಾ ಚುನಾವಣೆಯಲ್ಲಿ ಬಾಗಲ ಕೋಟೆ ಕ್ಷೇತ್ರದಿಂದ ಲೋಕಸಭೆಗೂ ಜನತಾದಳದಿಂದ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರದಲ್ಲಿ ಎರಡು ಭಾರಿ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



