ದೇಶದಲ್ಲಿ ಹಲವು ರಾಜ್ಯಗಳಲ್ಲಿ ಮತಗಳ್ಳತನ ಮಾಡಿಯೇ ಬಿಜೆಪಿ ಅಧಿಕಾರಕ್ಕೆ ಬಂದಿದೆ : ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

Nov 8, 2025 - 13:50
ದೇಶದಲ್ಲಿ ಹಲವು ರಾಜ್ಯಗಳಲ್ಲಿ ಮತಗಳ್ಳತನ ಮಾಡಿಯೇ ಬಿಜೆಪಿ ಅಧಿಕಾರಕ್ಕೆ ಬಂದಿದೆ : ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು : ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮತಗಳ್ಳತನ ಕುರಿತಂತೆ ಸಹಿ ಸಂಗ್ರಹ ಅಭಿಯಾನದ ವಿಚಾರವಾಗಿ ಮಾತನಾಡಿದ ಅವರು, ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಸಂವಿಧಾನದಲ್ಲಿ ಆಯೋಗವನ್ನು ಸ್ವತಂತ್ರ ಸಂಸ್ಥೆಯಾಗಿ ಮಾಡಲಾಗಿದೆ ಚುನಾವಣಾ ಆಯೋಗವು ಯಾರ ಪ್ರಭಾವಕ್ಕೂ ಒಳಗಾಗಬಾರದು.

ಬಿಜೆಪಿ ಸೋಲಿನ ಸರದಾರ ಅಷ್ಟೇ ಅಲ್ಲ ಸುಳ್ಳೇ ಅವರ ಮನೆದೇವರ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಮತಗಳ್ಳತನ ಮಾಡುವಲ್ಲೂ ನಿಸ್ಮರು ಅಂತ ಬಿಜೆಪಿಯವರು ಸಾಬೀತು ಮಾಡಿದ್ದಾರೆ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ ಲೋಕಸಭೆ ವಿಧಾನಸಭೆ ಚುನಾವಣೆಯಲ್ಲೂ ಮತಗಳತನ ಮಾಡಿದ್ದಾರೆ ದೇಶದ ಹಲವು ರಾಜ್ಯಗಳಲ್ಲಿ ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0