ರಾಜ್ಯ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ : CM ಸಿದ್ದರಾಮಯ್ಯ ಘೋಷಣೆ.!

Mar 7, 2025 - 14:30
ರಾಜ್ಯ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ : CM ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ. 

ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು, ಬಿಸಿಯೂಟ ಕಾರ್ಯಕರ್ತರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗುವುದು, 100 ಪ್ರಾಥಮಿಕ, 50 ಪ್ರೌಢಶಾಲೆಗಳ ಉನ್ನತೀಕರಣ, 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

1080 ಕೋಟಿ ರೂ.ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ ಜಾರಿಗೆ ತರಲಾಗುವುದು. ಮೊದಲ ಹಂತದಲ್ಲಿ 70 ಕೆರೆ ತುಂಬಿಸುವ ಯೋಜನೆ. ಎತ್ತಿನಹೊಳೆಗೆ ಯೋಜನೆಗೆ 553 ಕೋಟಿ ರೂ. ಯೋಜನೆ ಜಾರಿ. ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಜಾರಿ, 2 ಕೋಟಿ ರೂ.ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0