ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 8 ಮಂದಿ ಸಾವು: ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ ಸಂಭವಿಸಿದೆ. ಕೆಂಪು ಕೋಟೆ ಚಾಂದಿನಿ ಚೌಕ್ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಂಡಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಸ್ಫೋಟದ ರಭಸಕ್ಕೆ ಎರಡು ಕಾರುಗಳು ಭಸ್ಮವಾಗಿದೆ. ಇತರ ಮೂರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದೆ. ಪಾರ್ಕ್ ಮಾಡಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಸ್ಫೋಟದ ಕಾರಣ ಸ್ಪಷ್ಟವಾಗಿಲ್ಲ. ಆದರೆ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಾರಿನಲ್ಲಿ ಸ್ಫೋಟಕವಿಟ್ಟು ಬ್ಲಾಸ್ಟ್ ಮಾಡಿರುವ ಅನುಮಾನಗಳು ವ್ಯಕ್ತವಾಗುತ್ತಿದೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಮೂರರಿಂದ 6 ಕಾರು, 3 ಆಟೋ ಸೇರಿ ಹಲವು ವಾಹನಗಳು ಬೆಂಕಿಯಿಂದ ಹೊತ್ತಿ ಹುರಿಯುತ್ತಿವೆ. ಬೆಂಕಿ ನಂದಿಸಲು ದೆಹಲಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಘಟನೆ ನಂತರ ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿಗದೆ. ಘಟನಾ ಸ್ಥಳಕ್ಕೆ NSG ಮತ್ತು NIA ತಂಡಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0