ನ.14 ರಂದು 'ಗೃಹಲಕ್ಷ್ಮಿ' ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್

Nov 12, 2025 - 12:39
ನ.14 ರಂದು 'ಗೃಹಲಕ್ಷ್ಮಿ' ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಗೃಹಲಕ್ಷ್ಮೀ ಫಲಾನುಭವಿಗಳ ಅನುಕೂಲಕ್ಕಾಗಿ ಗೃಹ ಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲಾಗುತ್ತಿದ್ದು, ನ.14ರಂದು ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾದ ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಅವರು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ನೋಂದಣಿ ಪ್ರಮಾಣಪತ್ರ ಹಸ್ತಾಂತರಿಸಿದರು.ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಅನುಕೂಲಕ್ಕಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲಾಗುತ್ತಿದೆ.

ಗೃಹಲಕ್ಷ್ಮೀ ಅಡಿಯಲ್ಲಿ 1.24 ಕೋಟಿ ಫಲಾನುಭವಿಗಳು ಯೋಜನೆಯಿಂದ ದೊರೆತ ಹಣವನ್ನು ಬೇರೆ ಮೂಲಗಳಲ್ಲಿ ತೊಡಗಿಸಿ ಆದಾಯ ಪಡೆಯುವಂತೆ ಸಂಘ ಸ್ಥಾಪಿಸಲಾಗುತ್ತಿದೆ. ಸಂಘದ ಮೂಲಕ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ರು.ವರೆಗೆ ಸಾಲ ನೀಡುವುದು ಸೇರಿ ಮತ್ತಿತರ ಸವಲತ್ತುಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ನ.19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0