ಹಾಂಗ್‌ಕಾಂಗ್ ಅಗ್ನಿ ಅವಘಡ: ಸಾವಿನ ಸಂಖ್ಯೆ 128ಕ್ಕೆ ಏರಿಕೆ; 200ಕ್ಕೂ ಅಧಿಕ ಮಂದಿ ಮಿಸ್ಸಿಂಗ್‌

Nov 29, 2025 - 10:59
ಹಾಂಗ್‌ಕಾಂಗ್ ಅಗ್ನಿ ಅವಘಡ: ಸಾವಿನ ಸಂಖ್ಯೆ 128ಕ್ಕೆ ಏರಿಕೆ; 200ಕ್ಕೂ ಅಧಿಕ ಮಂದಿ ಮಿಸ್ಸಿಂಗ್‌

ಹಾಂಗ್‌ಕಾಂಗ್: ಹಾಂಗ್‌ಕಾಂಗ್‌ನ ತೈಪೊ ಜಿಲ್ಲೆಯ ವಾಂಗ್ ಫುಕ್ ಕೋರ್ಟ್ ಎಂಬ 8 ಬಹುಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ. 2ನೇ ದಿನವಾದ ಗುರುವಾರವೂ ಬೆಂಕಿ ವ್ಯಾಪಿಸಿದ್ದರಿಂದ ಅಪಾರ ಪ್ರಮಾಣದ ಸಾವು ನೋವಾಯಿತು.

ಸದ್ಯ ಬೆಂಕಿಯನ್ನ ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ ಎಂದು ಅಗ್ನಿಶಾಮಕ ಸೇವೆಗಳ ಕಾರ್ಯಾಚರಣೆಗಳ ಉಪ ನಿರ್ದೇಶಕ ಡೆರೆಕ್ ಆರ್ಮ್‌ಸ್ಟ್ರಾಂಗ್ ಚಾನ್ ತಿಳಿಸಿದ್ದಾರೆ.

ಮತ್ತೊಂದು ಕಡೆ 44 ಇದ್ದ ಸಾವಿನ ಸಂಖ್ಯೆ 128ಕ್ಕೆ ಏರಿಕೆಯಾಗಿದೆ. ಅನೇಕರು ನಾಪತ್ತೆಯಾಗಿದ್ದು, ಸಾವುನೋವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹಾಂಗ್ ಕಾಂಗ್‌ನ ಹಿರಿಯ ನಾಯಕ ಜಾನ್ ಲೀ ಹೇಳಿದ್ದಾರೆ ಎಂದು ವರದಿಯಾಗಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0