ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ: ಮಾಲೀಕ, ಮ್ಯಾನೇಜರ್ ವಿರುದ್ಧ 'FIR' ದಾಖಲು

Dec 2, 2025 - 12:01
ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ: ಮಾಲೀಕ, ಮ್ಯಾನೇಜರ್ ವಿರುದ್ಧ 'FIR' ದಾಖಲು

ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ, ರಾಘವೇಂದ್ರ ರಾವ್ ಹಾಗೂ ಮ್ಯಾನೇಜರ್ ಸುಮಂತ್ ವಿರುದ್ಧ ಸುಳ್ಳು ದೂರು ನೀಡಿ, ಮಾನಹಾನಿ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.

ತನಿಖೆ ವೇಳೆ, ವಿಡಿಯೋ ಮಾಡಿದ್ದ ಯುವಕರು ಬ್ಲ್ಯಾಕ್‌ಮೇಲ್ ಮಾಡಿಲ್ಲ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆ ವಿಡಿಯೋ ಮಾಡಿದ್ದ ಯುವಕ, ತನ್ನ ಮೇಲೆ ಸುಳ್ಳು ಆಪಾದನೆ ಮಾಡಿದ್ದಾರೆಂದು ಏರ್‌ಪೋರ್ಟ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0