ಶಿವಮೊಗ್ಗ | ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಮಗು ಮೃತ್ಯು,ಹಲವರು ಗಂಭೀರ

Dec 30, 2025 - 13:51
ಶಿವಮೊಗ್ಗ | ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಮಗು ಮೃತ್ಯು,ಹಲವರು ಗಂಭೀರ

ಹೊಸನಗರ: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ದುರ್ಗಾಂಬ ಬಸ್ಸು ಹುಲಿಕಲ್ ಘಾಟ್ ರಸ್ತೆಯ ಬದಿ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡವರಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯ ಮಾಹಿತಿ ತಿಳಿದ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ.
ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0