ಕನ್ನಡ - ತಮಿಳು ಭಾಷಿಕರ ಹಕ್ಕು ರಕ್ಷಿಸಲಿದ್ದೇವೆ: ಸಿ.ಎಂ ಪಿಣರಾಯಿ ವಿಜಯನ್
ಮಲಯಾಳಂ ಭಾಷೆ ಮಸೂದೆ ವಿವಾದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಈ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯೂಟರ್ನ್ ತೆಗೆದುಕೊಂಡಿದ್ದಾರೆ. ಕೇರಳ ಸರ್ಕಾರವು ಮಲಯಾಳಂ ಭಾಷೆ ಮಸೂದೆ ಮಂಡನೆ ಮಾಡುವುದಕ್ಕೆ ಮುಂದಾಗಿದೆ. ಈ ಹೊಸ ಮಸೂದೆಯ ಪ್ರಕಾರ ಕೇರಳದಲ್ಲಿ ಸರ್ಕಾರಿ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಪ್ರಥಮ ಭಾಷೆಯಾಗಿ ಎಲ್ಲರೂ ಕಡ್ಡಾಯವಾಗಿ ಕಲಿಯಬೇಕು ಇದು ಭಾಷಾ ವಿವಾದ ಸ್ವರೂಪವನ್ನು ಪಡೆದುಕೊಂಡಿತ್ತು.
ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಮಲಯಾಳಂ ಭಾಷಾ ಮಸೂದೆ, 2025 ರ ಬಗ್ಗೆ ಎದ್ದಿರುವ ಆತಂಕಗಳು ಸತ್ಯಕ್ಕೆ ದೂರವಾಗಿದೆ. ಕೇರಳ ವಿಧಾನಸಭೆಯು ಅಂಗೀಕರಿಸಿದ ಮಸೂದೆಯಲ್ಲಿ ಯಾವುದೇ ಭಾಷಾ ಹೇರಿಕೆ ಆಗಿಲ್ಲ.
ಕೇರಳದ ಪ್ರಗತಿ ಯಾವಾಗಲೂ ಸಮಾನತೆ ಮತ್ತು ಸಹೋದರತ್ನದಲ್ಲಿ ನೆಲೆಗೊಂಡಿರುವ ಸಮಗ್ರ ಅಭಿವೃದ್ಧಿಯಲ್ಲಿ ಬೇರೂರಿದೆ. ಜಾತ್ಯತೀತತೆ ಮತ್ತು ಬಹುತ್ತದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಸರ್ಕಾರ ದೃಢವಾಗಿದೆ ಎಂದು ಹೇಳಿದ್ದಾರೆ.
ಭಾಷಾ ಅಲ್ಪಸಂಖ್ಯಾತರ, ವಿಶೇಷವಾಗಿ ಕನ್ನಡ ಮತ್ತು ತಮಿಳು ಮಾತನಾಡುವ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮಸೂದೆಯು ಸ್ಪಷ್ಟ ಮತ್ತು ಅನಿಯಂತ್ರಿತ ಷರತ್ತು (ಷರತ್ತು 7) ಅನ್ನು ಒಳಗೊಂಡಿದೆ. ಯಾವುದೇ ಭಾಷೆಯನ್ನು ಹೇರಲಾಗುವುದಿಲ್ಲ ಮತ್ತು ಭಾಷಾ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಎಂದು ಪ್ರಮುಖ ನಿಬಂಧನೆಗಳು ಖಚಿತಪಡಿಸುತ್ತವೆ.
ಅಧಿಸೂಚಿತ ಪ್ರದೇಶಗಳಲ್ಲಿ ತಮಿಳು ಮತ್ತು ಕನ್ನಡ ಭಾಷಿಕರು ಸಚಿವಾಲಯ, ಇಲಾಖಾ ಮುಖ್ಯಸ್ಥರು ಮತ್ತು ಸ್ಥಳೀಯ ಕಚೇರಿಗಳೊಂದಿಗೆ ಅಧಿಕೃತ ಪತ್ರವ್ಯವಹಾರಕ್ಕಾಗಿ ತಮ್ಮ ಮಾತೃಭಾಷೆಯನ್ನು ಬಳಸುವುದನ್ನು ಮುಂದುವರಿಸಬಹುದು. ಉತ್ತರಗಳನ್ನು ಅದೇ ಭಾಷೆಗಳಲ್ಲಿ ನೀಡಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ಮುಂದುವರಿದು ಮಲಯಾಳಂ ಅಲ್ಲದೇ ಮಾತೃಭಾಷೆ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮಕ್ಕೆ ಅನುಗುಣವಾಗಿ ಶಾಲೆಗಳಲ್ಲಿ ಲಭ್ಯವಿರುವ ಭಾಷೆಗಳನ್ನು ಆಯ್ಕೆ ಮಾಡಲು ಸ್ವತಂತ್ರರು. ಇತರ ರಾಜ್ಯಗಳು ಅಥವಾ ವಿದೇಶಗಳ ವಿದ್ಯಾರ್ಥಿಗಳು 9 ಮತ್ತು 10ನೇ ತರಗತಿ ಅಥವಾ ಉನ್ನತ ಶಿಕ್ಷಣ ಹಂತಗಳಲ್ಲಿ ಮಲಯಾಳಂ ಪರೀಕ್ಷೆಗಳಿಗೆ ಹಾಜರಾಗಲು ಒತ್ತಾಯಿಸಲಾಗುವುದಿಲ್ಲ.
ಕೇರಳದ ಭಾಷಾ ನೀತಿಯು 1963 ರ ಅಧಿಕೃತ ಭಾಷಾ ಕಾಯ್ದೆ ಮತ್ತು ಭಾರತದ ಸಂವಿಧಾನದ 346 ಮತ್ತು 347 ನೇ ವಿಧಿಗಳಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿದೆ. ಭಾರತದ ವೈವಿಧ್ಯತೆಯನ್ನು ಆಚರಿಸಬೇಕು ಹಾಗೂ ಯಾವುದನ್ನೂ ಬಲವಂತಪಡಿಸಬಾರದು.
ಮುಂದುವರಿದು ನಮ್ಮ ಸರ್ಕಾರವು ಪಾರದರ್ಶಕ ಕೇರಳ ಮಾದರಿಯ ಮೇಲೆ ನಾವು ನಂಬಿಕೆ ಇರಿಸಿದ್ದೇವೆ ಎಂದೂ ಹೇಳಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



