ಬಿಜೆಪಿ ಪ್ರಧಾನ ಕಚೇರಿಯಲ್ಲಿ ಚೀನಾ ಕಮ್ಯುನಿಸ್ಟ್ ಪಕ್ಷದ ಪ್ರತಿನಿಧಿಗಳು; ಆರ್.ಎಸ್.ಎಸ್ ನಾಯಕರೊಂದಿಗೂ ಭೇಟಿ
ನವದೆಹಲಿ: ಚೀನಾ ಕಮ್ಯುನಿಸ್ಟ್ ಪಕ್ಷದ (CPC) ಉನ್ನತ ಮಟ್ಟದ ಪ್ರತಿನಿಧಿ ತಂಡವು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದೆ. 2020ರ ಗಲ್ವಾನ್ ಗಡಿ ಸಂಘರ್ಷದ ನಂತರ ಉಭಯ ಪಕ್ಷಗಳ ಪ್ರತಿನಿಧಿಗಳ ನಡುವೆ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.
ಸೋಮವಾರ ಬಿಜೆಪಿ ಕಚೇರಿಗೆ ಆಗಮಿಸಿದ ಈ ತಂಡವು ಪಕ್ಷದ ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಿತು. ಸಿಪಿಸಿಯ ಅಂತರಾಷ್ಟ್ರೀಯ ವಿಭಾಗದ ಉಪ ಸಚಿವ ಸುನ್ ಹಯಾನ್ ನೇತೃತ್ವದ ತಂಡವು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿತ್ತು. ಬಿಜೆಪಿ ವಿದೇಶಾಂಗ ವ್ಯವಹಾರಗಳ ವಿಭಾಗದ ಮುಖ್ಯಸ್ಥ ವಿಜಯ್ ಚೌತೈವಾಲೆ ಅವರು ಎಕ್ಸ್ (X) ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಭಾರತದಲ್ಲಿನ ಚೀನಾ ರಾಯಭಾರಿ ಕ್ಸು ಫೀಹಾಂಗ್ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಂಗಳವಾರ, ಸಿಪಿಸಿ ಪ್ರತಿನಿಧಿ ತಂಡವು ಆರ್.ಎಸ್.ಎಸ್ (RSS) ಸದಸ್ಯರನ್ನೂ ಭೇಟಿ ಮಾಡಿದೆ. ಹಿರಿಯ ಆರ್.ಎಸ್.ಎಸ್ ನಾಯಕ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿವೆ. 2020ರ ಗಲ್ವಾನ್ ಸಂಘರ್ಷದ ನಂತರ ಭಾರತ ಮತ್ತು ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಬಿರುಕು ಉಂಟಾಗಿತ್ತು ಎಂಬುದು ಗಮನಾರ್ಹ.
What's Your Reaction?
Like
0
Dislike
0
Love
0
Funny
0
Angry
1
Sad
0
Wow
0



