ಥೈಲ್ಯಾಂಡ್‌ನಲ್ಲಿ ಭೀಕರ ರೈಲು ದುರಂತ: ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಉರುಳಿ 22 ಮಂದಿ ದುರ್ಮರಣ
ಬ್ಯಾಂಕಾಕ್: ಥೈಲ್ಯಾಂಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ನಿರ್ಮಾಣ ಹಂತದ ಬೃಹತ್ ಕ್ರೇನ್ ಒಂದು ಉರುಳಿಬಿದ್ದ ಪರಿಣಾಮ 22 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದುರಂತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬ್ಯಾಂಕಾಕ್‌ನಿಂದ ಸುಮಾರು 230 ಕಿಲೋಮೀಟರ್ ದೂರದಲ್ಲಿರುವ ನಖೋನ್ ಸಿಖಿಯೊ ಜಿಲ್ಲೆಯಲ್ಲಿ ಇಂದು ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದೆ. ಅತಿವೇಗದ ರೈಲು ಮಾರ್ಗದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ನಿಯಂತ್ರಣ ತಪ್ಪಿ ರೈಲಿನ ಮೇಲೆ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಕ್ರೇನ್ ಬಿದ್ದ ತೀವ್ರತೆಗೆ ರೈಲು ಹಳಿತಪ್ಪಿ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಬೋಗಿಗಳಲ್ಲಿದ್ದ ಪ್ರಯಾಣಿಕರು ಹೊರಬರಲಾರದೆ ಸಿಲುಕಿಕೊಂಡಿದ್ದರು. ಈ ಘಟನೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳವು ಸತತ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರು ಮತ್ತು ರಕ್ಷಣಾ ಪಡೆಗಳು ಪ್ರಸ್ತುತ ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದ್ದು, ಘಟನಾ ಸ್ಥಳದಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



