ಕೋಮುಧ್ವೇಶ, ಹಿಂಸೆಗೆ ಪ್ರಚೋದಿಸುವಂತೆ ಭಾಷಣ; ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲು

Jan 22, 2026 - 13:42
ಕೋಮುಧ್ವೇಶ, ಹಿಂಸೆಗೆ ಪ್ರಚೋದಿಸುವಂತೆ ಭಾಷಣ; ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ನಿವಾಸಿ ರಾಮಚಂದ್ರ ಕೆ ಎಂಬವರ ದೂರಿನಂತೆ, ದಿನಾಂಕ 12.01.2026ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ.

ಸದ್ರಿ ಭಾಷಣವನ್ನು “VIKASANA TV” (ವಿಕಸನ ಟಿವಿ) ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿರುತ್ತಾರೆ. ಸದ್ರಿ ಕಾರ್ಯಕ್ರಮದಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ದ, ಸದ್ರಿ ಭಾಷಣವನ್ನು ಪ್ರಸಾರ ಮಾಡಿದ “VIKASANA TV” (ವಿಕಸನ ಟಿವಿ) ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕಾನೂನುಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿತ್ತದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0