ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ: ಪೊಲೀಸ್ ಮಹಾ ನಿರ್ದೇಶಕರು, ಉಸ್ತುವಾರಿ ಸಚಿರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಂದ ಮಾಹಿತಿ ಪಡೆದರು.
ಬಳಿಕ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದರು. ಕಾನೂನು ಸವ್ಯವಸ್ಥೆ ಹದಗೆಡದಂತೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಘಟನೆ ಕುರಿತು ಮಾಹಿತಿ ನೀಡಿದರು.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಗುರುವಾರ ರಾತ್ರಿ 8.30ರ ಸುಮಾರಿಗೆ ಕೊಲೆ ಮಾಡಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಆಗಲಿದೆ. ಆರೋಪಿಗಳ ಬಂಧನಕ್ಕೆ 4 ತಂಡ ರಚನೆ ಮಾಡಿದ್ದೇವೆ ಎಂದರು.
What's Your Reaction?
Like
1
Dislike
0
Love
2
Funny
0
Angry
0
Sad
0
Wow
1



