ಭಾರತ-ಅಮೆರಿಕ ಐತಿಹಾಸಿಕ ವ್ಯಾಪಾರ ಒಪ್ಪಂದ: ಆಮದು ಸುಂಕ ಶೇ. 18ಕ್ಕೆ ಇಳಿಕೆ: ಟ್ರಂಪ್
ವಾಷಿಂಗ್ಟನ್: ಭಾರತ ಮತ್ತು ಯುಎಸ್ ವ್ಯಾಪಾರ ಒಪ್ಪಂದವು ಅಂತಿಮಗೊಂಡಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಭಾರತದ ಮೇಲೆ ಯುಎಸ್ ವಿಧಿಸಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಪ್ರಸ್ತುತ ಅಮೆರಿಕ ವಿಧಿಸಿರುವ ಸುಂಕವು ಶೇ. 25ರಿಂದ ಶೇ. 18ಕ್ಕೆ ಇಳಿಕೆಯಾಗಲಿದೆ. ಇದರ ಜೊತೆಗೆ ಭಾರತದ ಮೇಲೆ ವಿಧಿಸಲಾಗಿದ್ದ ಶೇ. 25ರಷ್ಟು ದಂಡನಾತ್ಮಕ ಸುಂಕವನ್ನೂ ಕೈಬಿಡಲಾಗುವುದು.
ಈ ಒಪ್ಪಂದದ ಪ್ರಕಾರ ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲಿದೆ ಮತ್ತು 500 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಇಂಧನ ಹಾಗೂ ತಂತ್ರಜ್ಞಾನವನ್ನು ಭಾರತ ಖರೀದಿಸಲಿದೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಉತ್ಪನ್ನಗಳಿಗೆ ಭಾರತದಲ್ಲಿ ಶೂನ್ಯ ಶೇಕಡಾ ಸುಂಕ ಇರಲಿದೆ ಎಂದೂ ಟ್ರಂಪ್ ತಿಳಿಸಿದ್ದಾರೆ.
ಅದೇ ಸಮಯದಲ್ಲಿ, ಭಾರತದ ಮೇಲಿನ ಸುಂಕವನ್ನು ಶೇ. 18ಕ್ಕೆ ಇಳಿಸಿದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ. ಈ ಘೋಷಣೆಗಾಗಿ ಭಾರತದ 1.4 ಬಿಲಿಯನ್ ಜನರ ಪರವಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ದೊಡ್ಡ ಧನ್ಯವಾದಗಳು ಎಂದು ಮೋದಿ ಹೇಳಿದ್ದಾರೆ. ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಮೋದಿ ಧನ್ಯವಾದ ತಿಳಿಸಿದ್ದಾರೆ. ರಷ್ಯಾ ತೈಲ ಖರೀದಿ ನಿಲ್ಲಿಸುವ ಕುರಿತಾದ ಟ್ರಂಪ್ ಅವರ ಇತರ ಹೇಳಿಕೆಗಳಿಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



