ಮುಂಬೈನಲ್ಲಿ ಎರಡು ವಿಮಾನಗಳ ರೆಕ್ಕೆಗಳು ಪರಸ್ಪರ ಡಿಕ್ಕಿ; ಪ್ರಯಾಣಿಕರು ಸುರಕ್ಷಿತ

Feb 4, 2026 - 11:27
ಮುಂಬೈನಲ್ಲಿ ಎರಡು ವಿಮಾನಗಳ ರೆಕ್ಕೆಗಳು ಪರಸ್ಪರ ಡಿಕ್ಕಿ; ಪ್ರಯಾಣಿಕರು ಸುರಕ್ಷಿತ

ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ರೆಕ್ಕೆಗಳು ಪರಸ್ಪರ ಡಿಕ್ಕಿಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿವೇನಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ರೆಕ್ಕೆಗಳ ತುದಿಗಳು ಪರಸ್ಪರ ಡಿಕ್ಕಿ ಹೊಡೆದವು.

ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನದ ರೆಕ್ಕೆಯು, ಲ್ಯಾಂಡ್ ಆಗಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಡಿಕ್ಕಿ ಹೊಡೆದಿದೆ. ಘಟನೆಯ ಸಮಯದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರಿದ್ದರೂ ಯಾರಿಗೂ ಗಾಯಗಳಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಏರ್ ಇಂಡಿಯಾದ ಮುಂಬೈ – ಕೊಯಮತ್ತೂರು ವಿಮಾನ ಮತ್ತು ಇಂಡಿಗೋದ ಹೈದರಾಬಾದ್ – ಮುಂಬೈ ವಿಮಾನ ಅಪಘಾತಕ್ಕೀಡಾಗಿವೆ. ಗ್ರೌಂಡ್ ಕಂಟ್ರೋಲ್ ವಿಭಾಗದ ಕಡೆಯಿಂದ ಸಂಭವಿಸಿದ ಲೋಪವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಎರಡೂ ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ.

ಪ್ರಸ್ತುತ ಎರಡೂ ವಿಮಾನಗಳನ್ನು ತಪಾಸಣೆಗಾಗಿ ಸ್ಥಗಿತಗೊಳಿಸಲಾಗಿದೆ (Ground ಮಾಡಲಾಗಿದೆ). ನಾಗರಿಕ ವಿಮಾನಯಾನ ನಿಯಂತ್ರಣ ಸಂಸ್ಥೆಯಾದ ಡಿಜಿಸಿಎ (DGCA) ಈ ಘಟನೆಯ ಬಗ್ಗೆ ತನಿಖೆ ಆರಂಭಿಸಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0