ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಭೇಟಿ
ಕೋಝಿಕೋಡ್ | ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರು ಭೇಟಿ ನಡೆಸಿದರು. ದೆಹಲಿಯಲ್ಲಿ ನಡೆದ ಈ ಭೇಟಿಯಲ್ಲಿ ವಿವಿಧ ಸಾಮಾಜಿಕ, ಮಾನವೀಯ, ಶೈಕ್ಷಣಿಕ ಮತ್ತು ಅಭಿವೃದ್ಧಿ ವಿಷಯಗಳ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಅಂತರಾಷ್ಟ್ರೀಯ ವಿದ್ಯಮಾನಗಳು ಚರ್ಚೆಯಾದವು. 'ಮನುಷ್ಯರೊಂದಿಗೆ' ಎಂಬ ಘೋಷವಾಕ್ಯದೊಂದಿಗೆ ನಡೆಸಿದ ಕೇರಳ ಯಾತ್ರೆಯ ಸಂದರ್ಭದಲ್ಲಿ ಸಮಾಜದ ವಿವಿಧ ಸ್ತರಗಳಿಂದ ಕೇಳಿಬಂದ ವಿಷಯಗಳನ್ನು ಪ್ರಧಾನಮಂತ್ರಿಯವರ ಗಮನಕ್ಕೆ ತರಲಾಯಿತು. ಗ್ರ್ಯಾಂಡ್ ಮುಫ್ತಿಯವರ ಪವಿತ್ರ ರಂಜಾನ್ ಸಂದೇಶವನ್ನೂ ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು.
ಎಲ್ಲಾ ಜನವಿಭಾಗಗಳನ್ನು ಒಳಗೊಂಡ ಅಭಿವೃದ್ಧಿ, ಆರ್ಥಿಕ ಪ್ರಗತಿಯೊಂದಿಗೆ ಸಂತೋಷ ಸೂಚ್ಯಂಕ ಮತ್ತು ಮಾನವ ಅಭಿವೃದ್ಧಿಗೆ ನೀಡಬೇಕಾದ ಆದ್ಯತೆ, ಜನಸಂಖ್ಯೆ ಮತ್ತು ಪ್ರಾದೇಶಿಕ ಸಮತೋಲನಕ್ಕೆ ಅನುಗುಣವಾಗಿ ಸಂಪನ್ಮೂಲಗಳನ್ನು ಲಭ್ಯವಾಗುವಂತೆ ಮಾಡುವ ಮಹತ್ವ, ವಕ್ಫ್-ಎಸ್‌ಐಆರ್ ಆತಂಕಗಳು, ಪುರಾತನ ಮಸೀದಿಗಳು ಮತ್ತು ಇಸ್ಲಾಮಿಕ್ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆ, ಮೌಲಾನಾ ಆಜಾದ್ ನ್ಯಾಷನಲ್ ಫೆಲೋಶಿಪ್ ಸೇರಿದಂತೆ ಅಲ್ಪಸಂಖ್ಯಾತ ಶೈಕ್ಷಣಿಕ ಕಲ್ಯಾಣ ಯೋಜನೆಗಳ ಪುನರ್ಸ್ಥಾಪನೆ, ಅಲಿಗಢ್ ಮುಸ್ಲಿಂ ವಿಶ್ವವಿದ್ಯಾಲಯದ ಮಲಪ್ಪುರಂ ಕೇಂದ್ರದ ಅಭಿವೃದ್ಧಿ ಹಾಗೂ ದೇಶದ ಅಲ್ಪಸಂಖ್ಯಾತ ಜನವಿಭಾಗಗಳೊಂದಿಗೆ ಕೇಂದ್ರ ಸರ್ಕಾರವು ನಿಕಟವಾಗಿ ವ್ಯವಹರಿಸುವ ಅಗತ್ಯತೆಯ ಬಗ್ಗೆ ಚರ್ಚೆ ನಡೆಯಿತು. ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಂತಿಯನ್ನು ಖಚಿತಪಡಿಸುವಲ್ಲಿ ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಮಧ್ಯಸ್ಥಿಕೆಗಳನ್ನು ಗ್ರ್ಯಾಂಡ್ ಮುಫ್ತಿ ಶ್ಲಾಘಿಸಿದರು.
ಭಾರತದಲ್ಲಿ ಗ್ರ್ಯಾಂಡ್ ಮುಫ್ತಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಕಲ್ಯಾಣ ಚಟುವಟಿಕೆಗಳು ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಹೆಚ್ಚಿಸುವ ರೀತಿಯಲ್ಲಿ ಅವರು ನಡೆಸುತ್ತಿರುವ ಸಾಮಾಜಿಕ-ಸಾಂಸ್ಕೃತಿಕ ಮಧ್ಯಸ್ಥಿಕೆಗಳ ಬಗ್ಗೆ ತಮಗೆ ತಿಳಿದಿದೆ ಎಂದು ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಭೇಟಿಯಲ್ಲಿ ಗ್ರ್ಯಾಂಡ್ ಮುಫ್ತಿ ಅವರ ಜೊತೆಗೆ ಸಮಸ್ತ ಕೇರಳ ಜಮ್ ಇಯ್ಯತುಲ್ ಉಲಮಾ ಕಾರ್ಯದರ್ಶಿ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮತ್ತು ಎಸ್.ವೈ.ಎಸ್ ಅಧ್ಯಕ್ಷ ಡಾ. ಮುಹಮ್ಮದ್ ಅಬ್ದುಲ್ ಹಕೀಂ ಅಝ್ಹರಿ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0