ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಭಾರತದ ಪ್ರತಿನಿಧಿಯಾಗಿ ಮಂಗಳವಾರ ಪಾಲ್ಗೊಂಡರು.
ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನು ಒಳಗೊಳ್ಳುವ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಅವರು ಹೇಳಿದರು.
ಪ್ರತ್ಯೇಕವಾಗಿ, ಸ್ಪೀಕರ್ ಅವರು ಬಾಂಗ್ಲಾದೇಶದ ನೂತನ ಪ್ರಧಾನಿಯನ್ನು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿಯವರ ಶುಭಾಶಯಗಳನ್ನು ತಿಳಿಸಿದರು. ಅಲ್ಲದೇ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರ ಆಹ್ವಾನವನ್ನು ಅವರು ರೆಹಮಾನ್‌ಗೆ ಹಸ್ತಾಂತರಿಸಿದರು ಎಂದು ಅಧಿಕಾರಿಗಳು ಢಾಕಾದಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಾರಿಕ್ ರೆಹಮಾನ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿ ಕುರಿತು ಅನಿಸಿಕೆ ಹಂಚಿಕೊಂಡಿರುವ ಓಂ ಬಿರ್ಲಾ, ಢಾಕಾದಲ್ಲಿ ಪ್ರಧಾನ ಮಂತ್ರಿ ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶದ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಸಂತೋಷವಾಗಿದೆ. ಪ್ರಜಾಪ್ರಭುತ್ವ, ಪ್ರಗತಿಶೀಲ ಮತ್ತು ಎಲ್ಲರನ್ನು ಒಳಗೊಳ್ಳುವ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ” ಎಂದು ಬರೆದುಕೊಂಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0