ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ವರ್ಗಾವಣೆ

Mar 14, 2025 - 19:13
ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ವರ್ಗಾವಣೆ

ಬಾಗಲಕೋಟೆ: ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ. ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್​​ಐ ಡಿಜೆ ಶಿವಪುರ, ಎಎಸ್​​ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ವರ್ಗಾವಣೆಗೊಂಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0