ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 26 ನಕ್ಸಲರು ಬಲಿ, ಯೋಧ ಹುತಾತ್ಮ

May 22, 2025 - 12:14
ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 26 ನಕ್ಸಲರು ಬಲಿ, ಯೋಧ ಹುತಾತ್ಮ

ರಾಯ್ಪರ್‌: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತ್ಯೆಗೀಡಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ಗೃಹ ಸಚಿವ ವಿಜಯ್ ಶರ್ಮಾ ತಿಳಿಸಿದ್ದಾರೆ.

ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.

ಏ.21 ರಿಂದ ಮೇ 11 ರ ನಡುವೆ ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯಲ್ಲಿ ಒಟ್ಟು 214 ನಕ್ಸಲ್ ಅಡಗುತಾಣಗಳನ್ನು ನಾಶಮಾಡಲಾಗಿತ್ತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0