ಮಂಗಳೂರು: ಪ್ರಚೋದನಕಾರಿ ಪೋಸ್ಟ್: 5 ಸಾಮಾಜಿಕ ಜಾಲತಾಣ ಪುಟಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರು

May 25, 2025 - 11:36
ಮಂಗಳೂರು: ಪ್ರಚೋದನಕಾರಿ ಪೋಸ್ಟ್: 5 ಸಾಮಾಜಿಕ ಜಾಲತಾಣ ಪುಟಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಸಮಾಜದಲ್ಲಿ ದ್ವೇಷದ ಭಾವನೆಗಳನ್ನು ಹುಟ್ಟುಹಾಕುತ್ತಿದ್ದ 4 ಇನ್‌ಸ್ಟಾಗ್ರಾಮ್ ಪುಟಗಳು ಮತ್ತು 1 ಫೇಸ್‌ಬುಕ್ ಪುಟವನ್ನು ಮಂಗಳೂರು ನಗರ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.
ವಿವಿಧ ಧರ್ಮ ಮತ್ತು ವರ್ಗಗಳ ಜನರ ನಡುವೆ ದ್ವೇಷವನ್ನು ಹುಟ್ಟುಹಾಕಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿದ್ದ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತಿದ್ದ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪುಟಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ನಿಷ್ಕ್ರಿಯಗೊಳಿಸಲಾದ ಪುಟಗಳು ಇವು:

vhp_bajrangadal_ashoknagar ಮತ್ತು shankha_nada ಎಂಬ 2 ಇನ್‌ಸ್ಟಾಗ್ರಾಮ್ ಪುಟಗಳ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2025 ಕಲಂ. 353(1), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದೆ.

_dj_bharath_2008 ಎಂಬ ಇನ್‌ಸ್ಟಾಗ್ರಾಮ್ ಪುಟದ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 69/2025 ಕಲಂ. 353(1), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದೆ.

karaavali_official ಎಂಬ ಇನ್‌ಸ್ಟಾಗ್ರಾಮ್ ಪುಟದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ. 86/2025 ಕಲಂ. 196, 351(3), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದೆ.

“ಆಶಿಕ್ ಮೈಕಾಲ” ಎಂಬ ಫೇಸ್‌ಬುಕ್ ಪುಟದ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 47/2025 ಕಲಂ. 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದೆ.
ಈ ಎಲ್ಲಾ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಈ ಪುಟಗಳ ಮಾಹಿತಿ ಹಾಗೂ ಅವುಗಳನ್ನು ನಿಷ್ಕ್ರಿಯಗೊಳಿಸುವ ಬಗ್ಗೆ ಸಂಬಂಧಪಟ್ಟ ಕಾನೂನು ಜಾರಿ ಏಜೆನ್ಸಿಗಳಿಗೆ ಪತ್ರ ವ್ಯವಹಾರ ನಡೆಸಿದ ನಂತರ, ಆ ಏಜೆನ್ಸಿಗಳು ಈ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪುಟಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸದಂತೆ ರದ್ದುಗೊಳಿಸಿವೆ.
ಇದುವರೆಗೆ ಒಟ್ಟು 06 ಇನ್‌ಸ್ಟಾಗ್ರಾಮ್ ಪುಟಗಳು ಮತ್ತು 01 ಫೇಸ್‌ಬುಕ್ ಪುಟವನ್ನು ನಿಷ್ಕ್ರಿಯಗೊಳಿಸಲಾಗಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0