ಬಂಟ್ವಾಳ | ರಹೀಂ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

May 29, 2025 - 19:35
ಬಂಟ್ವಾಳ | ರಹೀಂ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಂಗಳೂರು: ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್(21) ಮತ್ತು ಚಿಂತನ್‌(19) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬಂಟ್ವಾಳ ತಾಲೂಕಿನವರಾದ ಮೂವರನ್ನು ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ

ಮಂಗಳವಾರ ಮಧ್ಯಾಹ್ನ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ಮಾರಣಾಂತಿಕ ದಾಳಿ ನಡೆಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬ್ದುಲ್ ರಹೀಂ ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿರುವ ಕಲಂದರ್ ಶಾಫಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0