ಮಂಗಳೂರು ನೂತನ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ.ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳು ಮತ್ತು ಅಹಿತಕರ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನಲ್ಲಿ ಮೇಜರ್ ಸರ್ಜರಿ ನಡೆದಿದ್ದು, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಉಡುಪಿ ಎಸ್ಪಿಯಾದ್ದ ಡಾ.ಅರುಣ್ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



