ಮಂಗಳೂರಿನಲ್ಲಿ ಮಳೆ ಅಬ್ಬರ: ಪಂಪ್ ವೆಲ್ ನಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ

Jun 14, 2025 - 18:16
ಮಂಗಳೂರಿನಲ್ಲಿ ಮಳೆ ಅಬ್ಬರ: ಪಂಪ್ ವೆಲ್ ನಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ

ಮಂಗಳೂರು: ನಗರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಎಂದಿನಂತೆ ಮಂಗಳೂರಿನ ಪಂಪ್ ವೆಲ್ ಪ್ಲೈ ಓವರ್ ನ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ.

ಪಂಪ್‌ವೆಲ್ ವೃತ್ತ ಜಲಾವೃತಗೊಂಡಿರುವ ಕಾರಣ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಕಳೆದ ಸುಮಾರು ಒಂದು ತಾಸಿನಿಂದ ಈ ರಸ್ತೆಗಳಲ್ಲಿ ವಾಹನಗಳ ಸರಾಗ ಸಂಚಾರಕ್ಕೆ ಸಾಧ್ಯವಾಗದೆ ವಾಹನ ದಟ್ಟಣೆ ಉಂಟಾಗಿದೆ.

ಪಂಪ್‌ ವೆಲ್ ಹೆದ್ದಾರಿಯಲ್ಲಿ ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿದ್ದು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಟೋ ರಿಕ್ಷಾ, ದ್ವಿಚಕ್ರ ವಾಹನ ಸವಾರರು ಕೆಲಹೊತ್ತು ಶೇಖರಣೆಯಾಗಿದ್ದ ನೀರಿನಲ್ಲೇ ವಾಹನಗಳನ್ನು ತಳ್ಳಿಕೊಂಡು ಸಾಗಿದ್ದಾರೆ.

ಇದಲ್ಲದೆ ಪಡೀಲ್ ರೈಲ್ವೇ ಕೆಳ ಸೇತುವೆ, ಎಕ್ಕೂರು, ಜಪ್ಪಿನಮೊಗರು ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 1
Wow Wow 0