ಉಡುಪಿ : ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿಯ ಮುಂಬೈ ನಲ್ಲಿ ಬಂಧನ….!!

Jun 22, 2025 - 11:09
ಉಡುಪಿ : ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿಯ ಮುಂಬೈ ನಲ್ಲಿ ಬಂಧನ….!!

ಉಡುಪಿ: ನಗರದಲ್ಲಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಮೊಬೈಲ್ ನಲ್ಲಿ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಲ್ಲದೆ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ತಲೆಮರೆಸಿ ಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖ ಆರೋಪಿಯನ್ನು ಮಹಿಳಾ ಠಾಣ ಪೊಲೀಸರ ಬಂಧಿಸಿದ್ದಾರೆ.

ಬಂಧನವಾದ ಪ್ರಮುಖ ಆರೋಪಿ ಗೌತಮ್ ಅಣ್ಣಯ್ಯ ರಾವ್ ಎಂದು ಗುರುತಿಸಲಾಗಿದೆ.

ಗೌತಮ್ ಅಣ್ಣಯ್ಯ ರಾವ್ ನನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಮುಂಬೈಯಲ್ಲಿ ಬಾರ್ ಒಂದಕ್ಕೆ ಕುಡಿಯಲು ಬಂದಾಗ ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಹಂಗಳೂರು ಮೂಲದ ಪಾಂಡುರಂಗ ನಾಯ್ಕ ತಲೆಮರೆಸಿ ಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ಹದಿನೈದು ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ

ಈ ಬಗ್ಗೆ ಉಡುಪಿ ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0