ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ: ಶಿಕ್ಷಣ ಇಲಾಖೆಗೆ ಡಾ. ಬಿಳಿಮಲೆ ಆಗ್ರಹ
ಬೆಂಗಳೂರು: ಬೆಂಗಳೂರು ನಗರದಲ್ಲಿಯೇ ಹೆಚ್ಚು ಖಾಸಗಿ ಕೇಂದ್ರ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಬೋಧನೆಯನ್ನು ಕೈಗೊಳ್ಳದಿದ್ದರೂ ಶಿಕ್ಷಣ ಇಲಾಖೆ ಈ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವಿಷಾದನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಅಂತಹ ಕೆಲವು ಶಾಲೆಗಳ ಪಟ್ಟಿಯನ್ನು ಒದಗಿಸಿದೆ. ಇಲಾಖಾಧಿಕಾರಿಗಳು ತನಿಖೆ ಮಾಡಿದರೆ ಸತ್ಯ ತಿಳಿಯುತ್ತದೆ ಎಂದು ಹೇಳಿದ್ದಾರೆ.
ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವ ಕನ್ನಡ ಭಾಷೆಯ ಬಗ್ಗೆ ಇಲಾಖೆ ತೋರುವ ಅಗೌರವವಷ್ಟೇ ಅಲ್ಲ ನೆಲದ ಕಾನೂನಿನ ಉಲ್ಲಂಘನೆಯೂ ಆಗಿರುತ್ತದೆ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ.
ಶಿಕ್ಷಣ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ೨೦೨೦ರಲ್ಲಿ ರಚನೆಯಾಗಿರುವ ಸಮಿತಿಯ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಆಗ್ರಹಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



