ಹಾಸನದಲ್ಲಿ 'ಹೃದಯಾಘಾತಕ್ಕೆ' 20ನೇ ಬಲಿ : ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಸೈನಿಕ ಸಾವು!

Jun 30, 2025 - 10:20
ಹಾಸನದಲ್ಲಿ 'ಹೃದಯಾಘಾತಕ್ಕೆ' 20ನೇ ಬಲಿ : ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಸೈನಿಕ ಸಾವು!

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳ ಪ್ರಕರಣಗಳ ಸಂಖ್ಯೆ ಮುಂದುವರೆದಿದ್ದು, ಇದೀಗ ಗಡಿ ಕಾಯುವ ಯೋಧ ರಜೆಗೆ ಎಂದು ಊರಿಗೆ ಬಂದಾಗ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ.
18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ. ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟ‌ರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಸಾವನ್ನಪ್ಪಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0