ಬೆಂಗಳೂರಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ : 15ಕ್ಕೂ ಹೆಚ್ಚು ಆಟೋಗಳನ್ನು ಸೀಜ್ ಮಾಡಿದ ಅಧಿಕಾರಿಗಳು
ಬೆಂಗಳೂರು : ನಿಗದಿ ಮಾಡಿದ ದರಕ್ಕಿಂತಲೂ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಟೋ ಚಾಲಕರಿಗೆ ಸಾರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ 15 ಆಟೋಗಳನ್ನು ಇದೀಗ RTO ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಹೌದು ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಬಂದಿತ್ತು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚು ದರ ವಸೂಲಿ ಮಾಡುತ್ತಿರುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಲ್ಲದೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರಗಿಸುವಂತೆ ಸಾರಿಗೆ ಇಲಾಖೆ ಕಮಿಷನರ್ ಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



