ಎಸ್‌ವೈಎಸ್ ಸೌಹಾರ್ದ ಸಂಚಾರ ಯಶಸ್ವಿಗೊಳಿಸಿ : ಕರ್ನಾಟಕ ಮುಸ್ಲಿಂ ಜಮಾಅತ್ ದ. ಕ. ಈಸ್ಟ್ ಜಿಲ್ಲೆ ಕರೆ
ಪುತ್ತೂರು: ಕರಾವಳಿ ಕರ್ನಾಟಕದಲ್ಲಿ ಕೋಮು ವೈಷಮ್ಯವು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೌಹಾರ್ದ ಸಂದೇಶಗಳನ್ನು ಹರಡುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಕರಾವಳಿಯ ನೆಲದಲ್ಲಿ 'ಸೌಹಾರ್ದ ಸಂಚಾರ' ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದೇ ಬರುವ 2025 ಜುಲೈ 14, 15, 16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ಸರ್ವ ಮತೀಯರೂ ಜೊತೆಗೂಡಿ ಸಾಗುವ ಈ ಸಂಚಾರವು ಇಸ್ಲಾಮಿನ ಸೌಹಾರ್ದ ಸಂದೇಶವನ್ನು ಸಮಾಜದ ಮುಂದೆ ತೆರೆದಿಡಲಿದೆ. ಕುಂದಾಪುರ, ಉಡುಪಿ, ಕಾರ್ಕಳ, ಕಾಪು, ಪಡುಬಿದ್ರಿ, ಮುಲ್ಕಿ, ಸುರತ್ಕಲ್, ಮಂಗಳೂರು, ಫರಂಗಿಪೇಟೆ, ಬಿ.ಸಿ.ರೋಡು, ಕಲ್ಲಡ್ಕ ಕೇಂದ್ರವಾಗಿ ಹಾದು ಜುಲೈ 16 ರಂದು ಬೆಳಿಗ್ಗೆ 9 ಕ್ಕೆ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಪುತ್ತೂರು ಕೇಂದ್ರಕ್ಕೆ ಆಗಮಿಸಿ ಉಪ್ಪಿನಂಗಡಿ, ಕಡಬ ಮಾರ್ಗವಾಗಿ ಸುಳ್ಯ ಕೇಂದ್ರದಲ್ಲಿ ಸಮಾರೋಪಗೊಳ್ಳಲಿದೆ. ಪ್ರತೀ ಕೇಂದ್ರಗಳಲ್ಲೂ ಕಾಲ್ನಡಿಗೆ ಜಾಥಾ ಮತ್ತು ಸಭಾ ಕಾರ್ಯಕ್ರಮಗಳು ನಡೆಯಲಿವೆ.
ಆದುದರಿಂದ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘಟನೆಯ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ತಮಗೆ ಸಾಧ್ಯವಾಗುವ ಕೇಂದ್ರಗಳಿಗೆ ಆಗಮಿಸಿ ಸೌಹಾರ್ದ ಸಂಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



