ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!
ಧರ್ಮಸ್ಥಳ: ಇಲ್ಲಿ 2003ನೇ ಇಸವಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ತಾಯಿ ದ.ಕ.ಎಸ್ ಪಿಗೆ ಜು.15ರಂದು ದೂರು ನೀಡಿದ್ದಾರೆ.
ಈ ಬಗ್ಗೆ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಅದರಲ್ಲಿ “ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಸದ್ರಿ ಯುವತಿಯ ತಾಯಿ ಈ ದಿನ ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ. ಸದ್ರಿ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



