ಉಡುಪಿ ಸೇರಿದಂತೆ 14 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



