ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ 8,96,447 ವಿದ್ಯಾರ್ಥಿಗಳು ಇಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿಂದು ಮಾತನಾಡಿದ ಮುಖ್ಯಮಂತ್ರಿಗಳು, ಈ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೆ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



