ಧರ್ಮಸ್ಥಳ ಪ್ರಕರಣ | ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ; ಕಾನೂನು ರೀತಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರ ಮೂಲಕ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ,ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0



