ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಕೊಳೆತ ಮೃತದೇಹ ಪತ್ತೆ

Jul 22, 2025 - 20:10
ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಕೊಳೆತ ಮೃತದೇಹ ಪತ್ತೆ

ಬೆಳ್ತಂಗಡಿ: ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ನಡೆದಿದೆ.

ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕ ಬಸವರಾಜ್ ಪೊಲೀಸ್ ಪಾಟೀಲ್ (35) ಅವರು ಧರ್ಮಸ್ಥಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ

ಬಸವರಾಜ್ ಮಂಗಳವಾರ ಶಾಲೆಯಿಂದ ನಾಪತ್ತೆಯಾಗಿದ್ದರು. ಶಾಲೆಯ ಅಡುಗೆ ಕೋಣೆಯ ಕೀ ಅವರ ಬಳಿಯಲ್ಲಿತ್ತು. ಊರು ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದರಿಂದ ಮನೆಯವರು ಆತಂಕಗೊಂಡಿದ್ದರು.

ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು, ಅದರ ಮರುದಿನವೇ ಬಸವರಾಜ್ ಕಾಣೆಯಾಗಿದ್ದರು. ಜುಲೈ 20ರಂದು ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗದ ಹಳೆಯ ರಸ್ತೆಯಲ್ಲಿ ಬಸವರಾಜ್ ಅವರ ಮೃತ ದೇಹ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.

ಧರ್ಮಸ್ಥಳ ಠಾಣೆಯಲ್ಲಿ 194 BNS 2023ರಂತೆ ಪ್ರಕರಣ ದಾಖಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0