ಚಿಕ್ಕಮಗಳೂರು: ಬೀದಿ ನಾಯಿಗಳ ಹಾವಳಿ; 8 ಜನರ ಮೇಲೆ ದಾಳಿ, 3 ವರ್ಷದ ಮಗು ಸ್ಥಿತಿ ಗಂಭೀರ!

Jul 23, 2025 - 17:07
ಚಿಕ್ಕಮಗಳೂರು: ಬೀದಿ ನಾಯಿಗಳ ಹಾವಳಿ; 8 ಜನರ ಮೇಲೆ ದಾಳಿ, 3 ವರ್ಷದ ಮಗು ಸ್ಥಿತಿ ಗಂಭೀರ!

ಚಿಕ್ಕಮಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದೆ. ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಒಂದೇ ದಿನ 8 ಜನರ ಮೇಲೆ ನಾಯಿಗಳು ದಾಳಿ ಮಾಡಿವೆ. ಈ ಘಟನೆ ಸ್ಥಳೀಯರಲ್ಲಿ ಭೀತಿಯನ್ನುಂಟು ಮಾಡಿದೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಬೀದಿ ನಾಯಿಗಳ ಗುಂಪೊಂದು ಏಕಾಏಕಿ 8 ಜನರ ಮೇಲೆ ದಾಳಿ ನಡೆಸಿದೆ. ದಾಳಿಗೊಳಗಾದವರಲ್ಲಿ 3 ವರ್ಷದ ಮಗುವೊಂದು ಗಂಭೀರವಾಗಿ ಗಾಯಗೊಂಡಿದ್ದು, ಕಾಲು, ಕೈ ಮತ್ತು ದೇಹದ ಇತರ ಭಾಗಗಳಲ್ಲಿ ತೀವ್ರ ಗಾಯಗಳಾಗಿವೆ.

ಗಾಯಗೊಂಡ ಎಲ್ಲರನ್ನು ತಕ್ಷಣವೇ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಮಗುವಿನ ಗಂಭೀರ ಸ್ಥಿತಿಯನ್ನು ಗಮನಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಿದ್ದಾರೆ. ಉಳಿದ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ಕುಪಿತರಾದ ಸ್ಥಳೀಯರು ಚಿಕ್ಕಮಗಳೂರು ನಗರಸಭೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ತಡೆಗೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0