ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಧರೆಗುರುಳಿದ ಮರಗಳು: ರಸ್ತೆ ಸಂಪೂರ್ಣ ಬಂದ್
ಬೆಂಗಳೂರು: ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಳೆ ಆರ್ಭಟದಿಂದಾಗಿ ಹಲವೆಡೆ ಅವಾಂತರಗಳು ಸಂಭವಿಸುತ್ತಿದ್ದು, ಜನ ತತ್ತರಗೊಂಡಿದ್ದಾರೆ. ಇತ್ತ ಜಿಲ್ಲೆಯಲ್ಲಿ ಕೂಡ ಸಾಲು ಸಾಲು ಅವಾಂತರಗಳು ಸಂಭವಿಸುತ್ತಿದ್ದು, ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಹೀಗಾಗಿ ಮುಳ್ಳಯ್ಯನಗಿರಿ, ಬಾಬಾ ಬುಡನ್ ದರ್ಗಾ ಮತ್ತು ಝರಿ ಫಾಲ್ಸ್ ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಚಂದ್ರಿಕಾ ಎಸ್ಟೇಟ್, ತಿಪ್ಪೇನಹಳ್ಳಿ ಎಸ್ಟೇಟ್ ಮತ್ತು ಇಂದಿರಾನಗರ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದಿದೆ. ಸದ್ಯ ಸಂಚಾರ ಅಸ್ತವ್ಯಸ್ತವಾಗಿದೆ. ಮರ ಧರೆಗುರಳಿದ್ದರಿಂದ ವಿದ್ಯುತ್ ಕಂಬಕ್ಕೂ ಹಾನಿ ಉಂಟಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



