ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು ಸಾಧ್ಯತೆ‍: ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಚೇರಿಯಿಂದ ಹೇಳಿಕೆ

Jul 29, 2025 - 09:40
ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು ಸಾಧ್ಯತೆ‍: ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಚೇರಿಯಿಂದ ಹೇಳಿಕೆ

ಸನಾ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ.

ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದ್ದು, ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯು, ಜು.16ಕ್ಕೆ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ ಮರಣದಂಡನೆಯನ್ನು ಇದೀಗ ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಆದಾಗ್ಯೂ, ಯೆಮೆನ್ ಸರ್ಕಾರದಿಂದ ಅಧಿಕೃತ ಲಿಖಿತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟಪಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಬೆಳವಣಿಗೆಯನ್ನು ಇನ್ನೂ ಖಚಿತಪಡಿಸಿಲ್ಲ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0